Karnataka

ವೈದ್ಯಕೀಯ ಪ್ರವೇಶ ಪರೀಕ್ಷೆ NEET ನಲ್ಲಿ ಕನ್ನಡ ಭಾಷೆ ಮೂಲೆಗುಂಪು

ದೇಶದೆಲ್ಲೆಡೆ ಏಕರೂಪದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ಎನ್‌ಇಇಟಿ) ನಡೆಸಲು ಹೊರಟಿರುವ ಆರೋಗ್ಯ ಇಲಾಖೆ, 2017-18 ನೇ ಸಾಲಿನಿಂದ 8 ಭಾಷೆಗಳಲ್ಲಿ ನಡೆಯಲಿದೆ. ಆದರೆ, ಕನ್ನಡ ಭಾಷೆಯನ್ನು ಕಡೆಗಣಿಸಲಾಗಿದೆ. ಈ ಬಗ್ಗೆ ಕನ್ನಡಿಗರು ಸಾಮಾಜಿಕ ಜಾಲ ತಾಣಗಳಲ್ಲಿ ಭಾರಿ ಚರ್ಚೆ ನಡೆಸಿದ್ದಾರೆ.

2017-18 ನೇ ಸಾಲಿನಿಂದ 8 ಭಾಷೆಗಳಲ್ಲಿ ಹಿಂದಿ, ಇಂಗ್ಲೀಷ್, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ಪ್ರವೇಶ ಪರೀಕ್ಷೆ ಬರೆಯಬಹುದಾಗಿದೆ. ದೇಶದಾದ್ಯಂತ ವೈದ್ಯಕೀಯ (ಎಂಬಿಬಿಎಸ್‌) ಮತ್ತು ದಂತ ವೈದ್ಯಕೀಯ (ಬಿಡಿಎಸ್‌) ಕೋರ್ಸ್‌ಗಳ ಪ್ರವೇಶಕ್ಕಾಗಿ ಏಕರೂಪದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ಎನ್‌ಇಇಟಿ) ನಡೆಸಬೇಕು ಎಂದು ಸುಪ್ರೀಂಕೋರ್ಟ್‌ ಕೂಡಾ ಆದೇಶ ನೀಡಿತ್ತು. ನೀಟ್ ಪರೀಕ್ಷೆಯಿಂದಾಗಿ ತಮ್ಮ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದು ಏಕರೂಪದ ಪ್ರವೇಶ ಪರೀಕ್ಷೆಯನ್ನು ವಿರೋಧಿಸಿದ್ದ ಕರ್ನಾಟಕ, ತಮಿಳುನಾಡು, ಜಮ್ಮು ಮತ್ತು ಕಾಶ್ಮೀರ ರಾಜ್ಯಗಳು ಹಾಗೂ ಖಾಸಗಿ ಕಾಲೇಜುಗಳು ಸಲ್ಲಿಸಿದ್ದ ಅರ್ಜಿ ತಿರಸ್ಕಾರಗೊಂಡಿದೆ. ಆದರೆ, ತಮಿಳು ಭಾಷೆಯನ್ನು ಈಗ ಅಳವಡಿಸಿಕೊಳ್ಳಲಾಗಿದ್ದು, ಕನ್ನಡ ಆಯ್ಕೆ ನೀಡಿಲ್ಲ. ಈ ರೀತಿಯಾಗಿ ಕನ್ನಡ ಭಾಷೆಯನ್ನು ಕೈಬಿಟ್ಟಿರುವುದು ನಿಜಕ್ಕೂ ಅಚ್ಚರಿ ತಂದಿದೆ.

‘ನಮ್ಮ ರಾಜ್ಯ ಅತಿ ಹೆಚ್ಚು ಮೆಡಿಕಲ್ ಕಾಲೇಜುಗಳನ್ನು ಹೊಂದಿದ್ದು. ಕರ್ನಾಟಕದಲ್ಲಿನ ಶೇ.70 ರಷ್ಟು ಮಕ್ಕಳು ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಕನ್ನಡ ಮಾಧ್ಯಮದಲ್ಲಿಯೇ ಬರೆಯುತ್ತಾರೆ. ಕೇಂದ್ರದ ಈ ನಿರ್ಧಾರದಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಹಾಗೂ ಕನ್ನಡಿಗರನ್ನು ಅವಕಾಶ ವಂಚಿತರನ್ನಾಗಿ ಮಾಡಿದೆ. ಅಲ್ಲದೆ ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ನಮ್ಮ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ. ಅಷ್ಟೇ ಅಲ್ಲದೆ 7 ಕೋಟಿ ಕನ್ನಡಿಗರಿಗೆ ಅನ್ಯಾಯ ಮಾಡಲಾಗಿದೆ.’ ಎಂದು ಹಲವಾರು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ರಾಜ್ಯ ಪರೀಕ್ಷಾ ಮಂಡಳಿ ನಡೆಸುವ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಮಾನತೆ ಒದಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ, ರಾಜ್ಯ ಆರೋಗ್ಯ ಇಲಾಖೆಗಳ ಸಹಯೋಗದ ಪ್ರಯತ್ನವಾಗಿದೆ ಎಂದು ವೈದ್ಯಕೀಯ ಪರೀಕ್ಷೆ ವಿಭಾಗದ ಜಂಟಿ ಕಾರ್ಯದರ್ಶಿ ಎ.ಕೆ ಸಿಂಘಾಲ್ ಹೇಳಿದ್ದಾರೆ.

ಈಗಾಗಲೇ ನೀಟ್ ಪರೀಕ್ಷೆ ವಿಷಯಕ್ಕೆ ಸಂಬಂಧಿಸಿದಂತೆ ಕನ್ನಡಕ್ಕೆ ಆಗಿರುವ ಅನ್ಯಾಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಟೀಕೆಗಳು ಮತ್ತು ಚರ್ಚೆಗಳು ನಡೆಯುತ್ತಿವೆ. ಕನ್ನಡ ಭಾಷೆ ಹಾಗೂ ಕನ್ನಡಿಗರಿಗೆ ಆಗಿರುವ ಅನ್ಯಾಯದ ವಿರುದ್ಧ ಪ್ರತಿಭಟನೆ ತೀವ್ರವಾಗುವ ಮುನ್ನ ನಮ್ಮ ಜನಪ್ರತಿನಿಧಿಗಳು ಹಾಗೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳುವುದು ಒಳ್ಳೆಯದು.like our Facebook page @ fb.com/thenewsism

Comments

comments

Click to comment

Leave a Reply

To Top