News

ಅಂತೂ ಇಂತೂ ರೈತರ ಸಾಲ ಮನ್ನಾ ಮಾಡಿ ಕೇಂದ್ರಕ್ಕೆ ಚಾಲೆಂಜೆ ಮಾಡಿದ ಸಿದ್ದರಾಮಯ್ಯ..!

ಹೌದು ಕೊನೆಗೂ ಕರ್ನಾಟಕದಲ್ಲಿ ಸಾಲ ಮನ್ನಾ ಆಗಿದೆ ಇಂದು ಘೋಷಣೆ ಮಾಡಿರುವ ಸಿಎಂ ರೈತರ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಿದ್ದು, ಇದೀಗ ಕೇಂದ್ರ ಸರ್ಕಾರಕ್ಕೆ ಚಾಲೆಂಜೆ ಮಾಡುತ್ತಿದ್ದಾರೆ.

ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ನೀವು ವಾಣಿಜ್ಯ ಬ್ಯಾಂಕ್ ಗಳಲ್ಲಿ ರೈತರ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿಯವರಿಗೆ ಟ್ವಿಟ್ಟರ್ ಮೂಲಕ ಸಿಎಂ ಪರೋಕ್ಷವಾಗಿಯೇ ಚಾಲೆಂಜ್ ಹಾಕಿದ್ದಾರೆ.

ರಾಜ್ಯ ಸರ್ಕಾರದಿಂದ ಸಹಕಾರಿ ಬ್ಯಾಂಕ್‍ಗಳಿಂದ ರೈತರು ಪಡೆದ ಅಲ್ಪವಾಧಿ 50 ಸಾವಿರ ಸಾಲವನ್ನು ಮನ್ನಾ ಮಾಡಲಾಗುವುದು. 2017ರ ಜೂನ್ 20ಕ್ಕೆ ಕೊನೆಗೊಂಡಂತೆ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಲಾಗುವುದು. ಒಟ್ಟು 8165 ಕೋಟಿ ರೂ. ಇದರಿಂದಾಗಿ 22 ಲಕ್ಷ ರೈತರಿಗೆ ಸಹಾಯವಾಗಲಿದೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Amazon Big Indian Festival
Amazon Big Indian Festival

Copyright © 2016 TheNewsism

To Top