Karnataka

ಎಲ್ಲ ಬ್ಯಾಂಕ್ ಉದ್ಯೋಗಿಗಳಿಗೆ ಕನ್ನಡ ಕಡ್ಡಾಯ ಮಾಡಿ..! ಕನ್ನಡ ಪ್ರೀತಿ ಮೆರೆದ ಸರ್ಕಾರ…

ಬೆಂಗಳೂರು: ಈ ಹಿಂದೆ ರಾಜ್ಯದಲ್ಲಿನ ಎಲ್ಲ ಶಾಲೆಗಳಲ್ಲೂ ಕನ್ನಡವನ್ನು ಒಂದು ವಿಷಯವಾಗಿ ಕಲಿಸಬೇಕು ಎಂದು ಕರ್ನಾಟಕ ಸರಕಾರ ಕಡ್ಡಾಯ ಮಾಡಿದೆ. ಈಗ ಬ್ಯಾಂಕುಗಳ ಸರದಿ. ಎರಡು ದಶಕಗಳಿಂದ ಬ್ಯಾಂಕುಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿಸಲು ನಾನಾ ರೀತಿಯ ಪ್ರಯತ್ನಗಳು ನಡೆಯುತ್ತಿದ್ದವು, ಈಗ ಅದಕ್ಕೆ ಪ್ರತಿಫಲ ಸಿಕ್ಕಿದೆ. ಅದೇನೆಂದರೆ ಎಲ್ಲ ಬ್ಯಾಂಕುಗಳು ತಮ್ಮ ಉದ್ಯೋಗಿಗಳಿಗೆ ಕನ್ನಡವನ್ನು ಕಡ್ಡಾಯವಾಗಿ ಕಲಿಯಬೇಕು ಎಂದು ಸೂಚಿಸಿದೆ.

ಬ್ಯಾಂಕುಗಳ ಆಡಳಿತ ವ್ಯವಹಾರದಲ್ಲಿ ತ್ರಿಭಾಷಾ ಸೂತ್ರ ಅನುಸರಣೆಯಿಂದಾಗಿ ಗ್ರಾಮೀಣ ಪ್ರದೇಶದ ಜನರಿಗೆ ಸಮಸ್ಯೆಯಾಗುತ್ತಿರುವ ಅಂಶ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪ್ರಾಧಿಕಾರ ಬ್ಯಾಂಕುಗಳಿಗೆ ಈ ಸೂಚನೆ ನೀಡಿದೆ. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಬ್ಯಾಂಕ್‌ಗಳ ಆಡಳಿತ ವ್ಯವಸ್ಥೆಯಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ಸಿಗಬೇಕು ಎಂದು ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್‌.ಜಿ.ಸಿದ್ಧರಾಮಯ್ಯ ರವರು ರಾಷ್ಟ್ರೀಕೃತ ಬ್ಯಾಂಕ್‌, ಷೆಡ್ಯೂಲ್ಡ್‌ ಬ್ಯಾಂಕ್‌ ಹಾಗೂ ಗ್ರಾಮೀಣ ಬ್ಯಾಂಕ್‌ಗಳ ಪ್ರಾಂತೀಯ ಮುಖ್ಯಸ್ಥರಿಗೆ ಸೋಮವಾರ ಪತ್ರ ಬರೆದಿದ್ದರೆ.

‘ಬ್ಯಾಂಕ್‌ಗಳಲ್ಲಿ ಹಿಂದಿ ಭಾಷಾ ಅನುಷ್ಠಾನಕ್ಕೆ ಹಿಂದಿ ಘಟಕವನ್ನು ತೆರೆದಂತೆಯೇ, ಕನ್ನಡ ಭಾಷೆಯನ್ನು ಅನುಷ್ಠಾನಗೊಳಿಸಲು ಪ್ರತಿ ಶಾಖೆಯಲ್ಲಿಯೂ ಕನ್ನಡ ಘಟಕವನ್ನು ಕಡ್ಡಾಯವಾಗಿ ಆರಂಭಿಸಬೇಕು. ಬ್ಯಾಂಕ್‌ಗಳ ಜಾಹೀರಾತು ಹಾಗೂ ವಾರ್ಷಿಕ ವರದಿಯನ್ನು ಕನ್ನಡ ಭಾಷೆಯಲ್ಲೂ ಮುದ್ರಿಸಬೇಕು’ ಎಂದು ಪ್ರಾಧಿಕಾರ ಸೂಚಿಸಿದೆ. ಬ್ಯಾಂಕುಗಳಲ್ಲಿ ಕರ್ತವ್ಯ ನಿರ್ವಹಿಸುವ ಅನ್ಯಭಾಷಿಕ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಆರು ತಿಂಗಳ ಒಳಗೆ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಯಬೇಕು. ಎಂದು ಸೂಚಿಸಲಾಗಿದೆ.

ಬ್ಯಾಂಕುಗಳ ಆಡಳಿತ ವ್ಯವಹಾರದ ಎಲ್ಲಾ ಸೌಲಭ್ಯಗಳು ಸರಳ ಹಾಗೂ ಸುಲಭವಾಗಿ ದೊರೆಯಲು ಎಲ್ಲಾ ಮಾಹಿತಿ ಕನ್ನಡದಲ್ಲೇ ಒದಗಿಸಬೇಕು, ದೈನಂದಿನ ವ್ಯವಹಾರ ಕನ್ನಡದಲ್ಲೇ ಇರಬೇಕು, ಎಲ್ಲಾ ಮುದ್ರಿತ ನಮೂನೆಗಳ ವ್ಯವಹಾರ ಕನ್ನಡದಲ್ಲೇ ಇರಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಾಜ್ಯದ ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳು, ಷೆಡ್ಯೂಲ್ಡ್‌ ಹಾಗೂ ಗ್ರಾಮೀಣ ಬ್ಯಾಂಕುಗಳ ಪ್ರಾಂತೀಯ ಮುಖ್ಯಸ್ಥರಿಗೆ ಸೂಚಿಸಿದೆ.

ಆರು ತಿಂಗಳಲ್ಲಿ ಕನ್ನಡವನ್ನು ಕಲಿಯದಿದ್ದರೆ ಈ ಬ್ಯಾಂಕುಗಳ ನೌಕರರು ತಮ್ಮ ಉದ್ಯೋಗವನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ. ಬ್ಯಾಂಕುಗಳು ಈ ಎಲ್ಲ ಅಂಶಗಳನ್ನು ಆದ್ಯತೆ ಮೇರೆಗೆ ಕ್ರಮವಹಿಸಿ ಪ್ರಾಧಿಕಾರಕ್ಕೆ ವರದಿ ನೀಡಬೇಕು. ಈ ಸಂಬಂಧ ಮುಂದಿನ ದಿನಗಳಲ್ಲಿ ಬ್ಯಾಂಕುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿಯೂ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಎಸ್‌.ಜಿ. ಸಿದ್ದರಾಮಯ್ಯ ಬ್ಯಾಂಕುಗಳ ಪ್ರಾಂತೀಯ ಮುಖ್ಯಸ್ಥರಿಗೆ ತಿಳಿಸಿದ್ದಾರೆ.

Amazon Big Indian Festival
Amazon Big Indian Festival

Copyright © 2016 TheNewsism

To Top