Get Inspired

ಮೈ ಜುಮ್ಮೆನಿಸುವ ವಿವೇಕಾನಂದರ ಮಂತ್ರಗಳು.. ಸದಾ ನೆನಪಿನಲ್ಲಿ ಇರಬೇಕಾದ ಮಾತುಗಳು.. ಓದಿದರೇ ಜೀವನದ ದಿಕ್ಕೇ ಬದಲಾಗುವುದು..

 

ವಿವೇಕಾನಂದರ ಮಾತುಗಳೇ ಹಾಗೆ.. ಜಡ ಹಿಡಿದ ವಸ್ತುವಿಗೂ ಚೇತನ ತುಂಬಿಕೊಳ್ಳುತ್ತದೆ.. ಅಂತ ಕೆಲವು ಮಂತ್ರಗಳು ಇಲ್ಲಿವೆ ಓದಿದರೆ ಸಾಧನೆಯ ಹಾದಿಯನ್ನು ಹಿಡಿಯುವೆವು.. ನಾವು ಮರೆಯಬಾರದ ವಿವೇಕಾನಂದರು ಹೇಳಿರುವ ಮಂತ್ರಗಳು..

ಮರೆಯದಿರಿ, ನಿಮ್ಮ ಸ್ತ್ರೀಯರ ಆದರ್ಶ ಸೀತಾ, ಸಾವಿತ್ರಿ, ದಮಯಂತಿಯರು.
ಮರೆಯದಿರಿ, ನೀವು ಪೂಜಿಸುವ ಜಗದೀಶ್ವರನು ತ್ಯಾಗಿಕುಲ ಚೂಡಾಮಣಿ, ಉಮಾವಲ್ಲಭ ಶಂಕರ.
ಮರೆಯದಿರಿ, ನಿಮ್ಮ ವಿವಾಹ, ನಿಮ್ಮ ಐಶ್ವರ್ಯ, ನಿಮ್ಮ ಜೀವನ ಬರಿಯ ಇಂದ್ರಿಯ ಭೋಗಕ್ಕಲ್ಲ, ವ್ಯಕ್ತಿಗತ ಸುಖಕ್ಕಲ್ಲ.
ಮರೆಯದಿರಿ, ನಿಮ್ಮ ಜನ್ಮವಿರುವುದೇ ಜಗನ್ಮಾತೆಯ ಅಡಿದಾವರೆಗಳಲ್ಲಿ ಬಲಿದಾನಕ್ಕಾಗಿ!
ಮರೆಯದಿರಿ, ನಿಮ್ಮ ಸಾಮಾಜಿಕ ರಚನೆ ಅನಂತ ವಿಶ್ವವ್ಯಾಪಿ ಜಗಜ್ಜನನಿಯ ಕಾಂತಿಯನ್ನು ಪ್ರತಿಬಿಂಬಿಸುವುದಕ್ಕಾಗಿ ಇರುವುದು.

ಮರೆಯದಿರಿ, ಅಂತ್ಯಜರು, ಮೂಢರು, ದರಿದ್ರರು, ನಿರಕ್ಷರಕುಕ್ಷಿಗಳು, ಚಂಡಾಲರು ಮತ್ತು ಚಮ್ಮಾರರು – ಎಲ್ಲರೂ ನಿಮ್ಮ ರಕ್ತಬಂಧುಗಳಾದ ಸಹೋದರರು ! ವೀರಾತ್ಮರೇ, ಧೀರರಾಗಿ, ನೆಚ್ಚುಗೆಡದಿರಿ. ಭಾರತೀಯರು ನಾವು ಎಂದು ಹೆಮ್ಮೆ ತಾಳಿ. ಸಾರಿ ಹೇಳಿ, ಭಾರತೀಯರು ನಾವು, ಭಾರತೀಯರೆಲ್ಲ ನಮ್ಮ ಸಹೋದರರು.ಸಾರಿ ಹೇಳಿ, ಮೂರ್ಖ ಭಾರತೀಯರೂ ನಮ್ಮ ಸಹೋದರರು, ಬ್ರಾಹ್ಮಣ ಭಾರತೀಯರೆಮ್ಮ ಸಹೋದರರು, ಪಂಚಮ ಭಾರತೀಯರೆಮ್ಮ ಸಹೋದರರು. ನೀವು ಒಂದು ಚಿಂದಿಬಟ್ಟೆಯನ್ನು ಸೊಂಟಕ್ಕೆ ಕಟ್ಟಿಕೊಂಡಿದ್ದರೂ ಕೂಡ, ಅಭಿಮಾನಪೂರ್ವಕವಾಗಿ ದಿಕ್‌ತಟಗಳು ಅನುರಣಿತವಾಗುವಂತೆ ತಾರಸ್ವರದಿಂದ ಸಾರಿ ಹೇಳಿ “ಭಾರತೀಯರು ನಮ್ಮ ಸಹೋದರರು, ಭಾರತೀಯರು ನಮ್ಮ ಪ್ರಾಣ. ಭಾರತೀಯ ದೇವ ದೇವತೆಗಳೆಲ್ಲರೂ ನಮ್ಮ ದೇವರು.

 

Amazon Big Indian Festival
Amazon Big Indian Festival

Copyright © 2016 TheNewsism

To Top