God

ಎಂತಹುದೇ ಕಷ್ಟವಿದ್ದರೂ ಬಾಬಾರನ್ನು ನಂಬಿದರೆ ಪರಿಹಾರವಾಗುವುದು.. ಸಾಯಿ ಬಾಬಾ ತಮ್ಮ ಭಕ್ತರಿಗೆ ಕೊಟ್ಟ ಅಭಯ ವಾಕ್ಯಗಳು ಇಲ್ಲಿವೆ ನೋಡಿ..

ಕಷ್ಟದಲ್ಲಿರುವವರಿಗೆ ಪವಾಡ ಪುರುಷ ಬಾಬ ರವರು ಕೊಟ್ಟ ಅಭಯ ವಾಕ್ಯಗಳು ಇಲ್ಲಿವೆ ನೋಡಿ

ಶಿರಡಿಯ ಪವಿತ್ರ ಮಣ್ಣಿನ ಮೇಲೆ ಪಾದವಿರಿಸಿದ ಯಾರಿಗೆ ಆಗಲಿ ಕೆಟ್ಟದ್ದು ಎಂಬುದು ಘಟಿಸಲಾರದು.

ನನ್ನ ಸಮಾಧಿಗೆ ಭೇಟಿ ಕೊಡುವರಿಗೆ ಕಷ್ಟ ಮತ್ತು ಯಾತನೆಗಳು ದೂರಾಗುವವು.

ನಾನು ಭೌತಿಕವಾಗಿ ಇಲ್ಲವಾದರೂ, ನನ್ನ ಸಮಾಧಿಯಿಂದಲೇ ಸದಾ ಭಕ್ತರನ್ನು ರಕ್ಷಿಸುತ್ತೇನೆ.

ನನ್ನನ್ನು ನಂಬಿ, ನಿಮ್ಮ ಎಲ್ಲ ಪ್ರಾರ್ಥನೆಗಳಿಗೂ ನನ್ನಲ್ಲಿ ಉತ್ತರಗಳಿವೆ.

ನನ್ನ ಆತ್ಮವು ಅಮರವಾಗಿದೆ. ಇದನ್ನು ಮೊದಲು ತಿಳಿದುಕೊಳ್ಳಿ.

ನನ್ನನ್ನು ನಂಬಿ ಆರಾಧಿಸಿದ ಭಕ್ತರ ಮನೆಯಲ್ಲಿ ಕಷ್ಟ ಎಂಬ ಪದವೇ ಇರಲಾರದು.

ನನಗೆ ಯಾರು ಸಂಪೂರ್ಣವಾಗಿ ಶರಣಾಗುವರೋ ಅವರಿಗೆ ನಾನು ಸಂಪೂರ್ಣ ಅಧೀನನಾಗಿರುತ್ತೇನೆ.

ಎಲ್ಲರ ಭಾರವನ್ನು ನಾನು ತೆಗೆದುಕೊಳ್ಳುತ್ತೇನೆ, ಇದರಲ್ಲಿ ಯಾವುದೇ ಅನುಮಾನ ಬೇಡ.

ಎಲ್ಲ ಸಹಾಯವೂ ಇಲ್ಲೇ ಸಿಗುತ್ತದೆ. ಇದನ್ನು ತಿಳಿಯಿರಿ ಯಾರು ಯಾರು ಹೇಗೆ ಬೇಡುತ್ತಾರೊ ಹಾಗೆ ಫಲವು
ದೊರೆಯುತ್ತದೆ.

ಯಾರಾದರೂ ನನಗೆ ಶರಣು ಬಂದು, ಅವರ ಜೀವನ ಪ್ರಯೋಜನವಾಗದೆ ಇದ್ದರೆ ತೋರಿಸಿ.

ಸಾಯಿ ಸಾಯಿ ಎಂದವನೇ ಪುಣ್ಯವಂತನು, ನನ್ನ ಮೇಲೆ ಅನನ್ಯ ವಿಶ್ವಾಸ ಶ್ರದ್ಧೆ ಇಟ್ಟು ಸಾಯಿ ಸಾಯಿ ಎಂದವನೇ
ಧನ್ಯನು.

ಶೇರ್ ಮಾಡಿ ಇನ್ನೊಬ್ಬರಿಗೂ ಸಹಾಯವಾಗಲಿ.. ಬಾಬಾರ ಕೃಪೆಗೆ ಪಾತ್ರರಾಗಿ..

Amazon Big Indian Festival
Amazon Big Indian Festival

Copyright © 2016 TheNewsism

To Top